ಭದ್ರಾ ನದಿ

ಭದ್ರಾ ನದಿಯು ಶಿವಮೊಗ್ಗ ಜಿಲ್ಲೆಯಲ್ಲಿ ಹರಿಯುವ ಒಂದು ನದಿಯಾಗಿದ್ದು, ಈ ನದಿಯು ದಕ್ಷಿಣ ಭಾರತದಲ್ಲಿ, ಅದರಲ್ಲೂ ಮುಖ್ಯವಾಗಿ ಕರ್ನಾಟಕ ರಾಜ್ಯದಲ್ಲಿ ಹರಿಯುವ ಪ್ರಮುಖ ನದಿಗಳಲ್ಲೊಂದು. ಭದ್ರಾ ನದಿಯು ಪಶ್ಚಿಮಘಟ್ಟದ ಭದ್ರಾ ನದಿಯು ವರಾಹ ಪರ್ವತದ ತಪ್ಪಲಿನಲ್ಲಿರುವ ಗಂಗಾ ಮೂಲದಲ್ಲಿ ಹುಟ್ಟಿ, ಪೂರ್ವಾಭಿಮುಖವಾಗಿ ಡೆಕ್ಕನ್ ಪ್ರಸ್ಥಭೂಮಿಯ ಮೇಲೆ ಹರಿಯುತ್ತದೆ.

ಇತರ ಉಪನದಿಗಳಾದ ಸೋಮವಾಹಿನಿ, ತಡಬೇಹಳ್ಳ ಮತ್ತು ಓಡಿರಾಯನಹಳ್ಳಗಳ ಜೊತೆ ಸೇರಿ ಚಿಕ್ಕಮಗಳೂರು ಜಿಲ್ಲೆಯ ಭದ್ರ ಅಭಯರಣ್ಯದ ಮೂಲಕ ಹರಿಯುತ್ತ ಮುಂದೆ ಸಾಗಿ ಶಿವಮೊಗ್ಗ ಜಿಲ್ಲೆಯ ಸಣ್ಣ ಪಟ್ಟಣ ‘ಕೂಡ್ಲಿ’ಯಲ್ಲಿ ತುಂಗಾ ನದಿಯೊಂದಿಗೆ ಸೇರಿ ತುಂಗಭದ್ರಾ ನದಿಯಾಗುತ್ತದೆ.

ಈ ಭದ್ರಾ ನದಿಗೆ ಲಕ್ಕವಳ್ಳಿಯ ಬಳಿ ಜಲಾಶಯವನ್ನು ನಿರ್ಮಿಸಲಾಗಿದೆ. ಈ ಅಣ್ಣೆಕಟ್ಟು ಸುಮಾರು 189 ಅಡಿ ಇದ್ದು, ೭೧.೫೩೫ ಟಿಎಂಸಿ ನೀರನ್ನು ಸಂಗ್ರಹಿಸಿಡುವ ಸಮರ್ಥ್ಯ ಹೊಂದಿದೆ. ನಂತರ ತುಂಗಭದ್ರೆಯು ಹರಿಯುತ್ತಾ, ಕರ್ನಾಟಕವನ್ನು ದಾಟಿ ಆಂಧ್ರ ಪ್ರದೇಶದಲ್ಲಿ ಕೃಷ್ಣಾ ನದಿಯ ಪ್ರಮುಖ ಉಪನದಿಯಾಗಿ ಸೇರಿಕೊಂಡು ಬಂಗಾಳ ಕೊಲ್ಲಿಗೆ ಸೇರುತ್ತದೆ.

ಶಿವಮೊಗ್ಗವು ಜಲಪಾತಗಳು, ಕಾಡುಗಳು ಮತ್ತು ಬೆಟ್ಟಗಳು ಸೇರಿದಂತೆ ಸುಂದರವಾದ ನೈಸರ್ಗಿಕ ತಾಣಗಳಿಂದ ಆವೃತವಾಗಿದೆ, ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಈ ಪ್ರದೇಶದ ಪ್ರಶಾಂತ ವಾತಾವರಣ ಮತ್ತು ಆಹ್ಲಾದಕರ ವಾತಾವರಣವು ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಭಾಷೆ ಬದಲಾಯಿಸಿ

error: Content is protected !!