ವೇದಾವತಿ ನದಿ

ವೇದಾವತಿ ನದಿಯು ಶಿವಮೊಗ್ಗ ಜಿಲ್ಲೆಯ ಬರುವ ಒಂದು ನದಿಯಾಗಿದ್ದು ಮತ್ತು ಈ ನದಿಯು ಶಿವಮೊಗ್ಗ ತಾಲ್ಲೂಕಿನ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ನದಿಗಳಲ್ಲಿ ಒಂದು. ಪಶ್ಚಿಮ ಘಟ್ಟಗಳಲ್ಲಿ ಹರಿದು ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಲ್ಲಿ ಹರಿದಾಡಿ ತುಂಗಭದ್ರಾ ನದಿಯೊಂದಿಗೆ ಸೇರುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಬಳಿ ಹುಟ್ಟುವ ‘ವೇದಾ’ ನದಿಗೆ ಕಡೂರು ಬಳಿಯ ಮದಗದಕೆರೆಯಿಂದ ಹರಿದು ಬರುವ ‘ಆವತಿ ಹಳ್ಳ’ವು ಸಂಗಮಿಸುವುದರೊಂದಿಗೆ ‘ವೇದಾವತಿ ನದಿ’ಯಾಗಿ ಹರಿದು ಮುಂದೆ ಸಾಗುತ್ತದೆ.

ಹಿರಿಯೂರು ಬಳಿಯ ಮಾರಿಕಣಿವೆ ಎಂಬಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರು ಕಟ್ಟಿದ ಮೊದಲ ಅಣೆಕಟ್ಟೆಯಾದ ‘ವಾಣಿವಿಲಾಸಸಾಗರ’ವನ್ನು ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ. ಅಲ್ಲಿಂದ ಮುಂದೆ ಹರಿದು ಆಂದ್ರಪ್ರದೇಶದ ಬಳಿಯಲ್ಲಿ ‘ಹಗರಿ ನದಿ’ಯಾಗಿ ಹರಿದು ಮುಂದೆ ತುಂಗಭದ್ರಾ ನದಿಯಲ್ಲಿ ವಿಲೀನವಾಗುತ್ತದೆ. ಅದಕ್ಕೂ ಮೊದಲು ‘ಸುವರ್ಣಮುಖಿ’ ಎಂಬ ನದಿಯೊಂದು ಈ ನದಿಯೊಂದಿಗೆ ಸಂಗಮಿಸುತ್ತದೆ.

ಶಿವಮೊಗ್ಗವು ಜಲಪಾತಗಳು, ಕಾಡುಗಳು ಮತ್ತು ಬೆಟ್ಟಗಳು ಸೇರಿದಂತೆ ಸುಂದರವಾದ ನೈಸರ್ಗಿಕ ತಾಣಗಳಿಂದ ಆವೃತವಾಗಿದೆ, ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಈ ಪ್ರದೇಶದ ಪ್ರಶಾಂತ ವಾತಾವರಣ ಮತ್ತು ಆಹ್ಲಾದಕರ ವಾತಾವರಣವು ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಭಾಷೆ ಬದಲಾಯಿಸಿ