ದೀಪ್ತಿ ಭದ್ರಾವತಿ

ದೀಪ್ತಿ ಭದ್ರಾವತಿ -ದಕ್ಷಿಣ ಕನ್ನಡದ ಮರವಂತೆ ಮೂಲದವರು. ಚಿಕ್ಕಮಂಗಳೂರಿನ ನಕ್ಕರಿಕೆ ಎಂಬ ಕುಗ್ರಾಮದಲ್ಲಿ ಹುಟ್ಟಿದ್ದು, ಹೆಸರು ಕೇವಲ ದೀಪ್ತಿ ಮಾತ್ರ ಆದರೆ ಭದ್ರಾವತಿಯ ಜೊತೆ ಅವಿನಾಭಾವ ಸಂಬಂಧ ಇರುವುದರಿಂದ ಹಾಗೂ ಅವರ ಜೀವನದಲ್ಲಿ ಬಾಲ್ಯದಿಂದ ಯೌವನದವರೆಗೆ ಭದ್ರಾವತಿಯ ಕೊಡುಗೆ ತುಂಬಾ ಇರುವುದರಿಂದ ದೀಪ್ತಿ ಭದ್ರಾವತಿ ಎಂಬ ಹೆಸರಿನಿಂದ ಕಾವ್ಯವನ್ನು ಬರೆಯುತ್ತಾರೆ.

ದೀಪ್ತಿಯವರು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವೀಧರರು, ಕುವೆಂಪು ವಿಶ್ವವಿದ್ಯಾಲಯದಲ್ಲಿ ಕನ್ನಡ ಸ್ನಾತಕೋತ್ತರ ಪದವಿಯನ್ನೂ ಹಾಗೂ ಹಿಂದಿಯಲ್ಲಿ ವಿಶಾರದ ಪದವಿಯನ್ನು ಪಡೆದಿದ್ದಾರೆ. ಪದವಿಪೂರ್ವದಲ್ಲಿ ವಿಜ್ಞಾನದ ವಿದ್ಯಾರ್ಥಿನಿಯಾಗಿದ್ದ ಇವರಿಗೆ ಸಾಹಿತ್ಯ ಕ್ಷೇತ್ರದ ಆಕರ್ಷಣೆ ಬೇರೆ ಬೇರೆ ಪದವಿಗಳಿಗೆ ಅನುವು ಮಾಡಿಕೊಟ್ಟಿತ್ತು. ಪ್ರಸ್ತುತ ಸರಕಾರಿ ಉದ್ಯೋಗದಲ್ಲಿದ್ದು ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  

ಅವರ ಕೃತಿಗಳು-ಕಾಗದದ ಕುದುರೆ,  ಗ್ರೀನ್ ರೂಮಿ. ಕಥಾ ಸಂಕಲನ- ಆ ಬದಿಯ ಹೂವು. ದೀಪ್ತಿ ಅವರ ‘ಆ ಬದಿಯ ಹೂವು’  ಕೃತಿಗೆ ಈ ವರ್ಷದ ಮಾಸ್ತಿ ಕಥಾ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಲೇಖಕಿಯರ ಸಂಘ ಬೆಂಗಳೂರು ಇವರು ಕೊಡಮಾಡುವ ಗೀತಾ ದೇಸಾಯಿ ದತ್ತಿ ನಿಧಿ ಪ್ರಶಸ್ತಿ,  ಮುಂಬೈಯ ಸುಶೀಲಾ ಶೆಟ್ಟಿ ಸ್ಮಾರಕ ಪ್ರಶಸ್ತಿ, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರ ಶಾರದಾ ವಿ ರಾವ್ ದತ್ತಿ ನಿಧಿ ಪ್ರಶಸ್ತಿ,  ಧಾರವಾಡದ ಹರಪನಹಳ್ಳಿ ಭೀಮವ್ವ ಪ್ರಶಸ್ತಿ,  ಮಂಡ್ಯದ ಬಿ.ಎಂ.ಶ್ರೀ ಕಾವ್ಯ ಪ್ರಶಸ್ತಿ,  ಈ ವರ್ಷ ಮಾಸ್ತಿ ಕಥಾ ಪ್ರಶಸ್ತಿ ಇವರ ಮುಡಿಗೇರಿವೆ. 

ಇದಲ್ಲದೆ ಸಂಕ್ರಮಣ ಸಾಹಿತ್ಯ ಪ್ರಶಸ್ತಿ, ಸಂಚಯ ಕಾವ್ಯ ಸ್ಪರ್ಧೆ ಬಹುಮಾನ, ಚೇತನಧಾರ ಟ್ರಸ್ಟ್ ಕಾವ್ಯ ಪ್ರಶಸ್ತಿ, ಗುರುಸಿದ್ಧ ಬಸವಶ್ರೀ ಪ್ರಶಸ್ತಿ, ವಿವಿಧ ಪತ್ರಿಕೆಗಳ ಕಥಾ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ. ಅವರ ಎರಡನೇ ಕಥಾ ಸಂಕಲನ “ಗೀರು” ಕೃತಿಯು ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. 

ಶಿವಮೊಗ್ಗವು ಜಲಪಾತಗಳು, ಕಾಡುಗಳು ಮತ್ತು ಬೆಟ್ಟಗಳು ಸೇರಿದಂತೆ ಸುಂದರವಾದ ನೈಸರ್ಗಿಕ ತಾಣಗಳಿಂದ ಆವೃತವಾಗಿದೆ, ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಈ ಪ್ರದೇಶದ ಪ್ರಶಾಂತ ವಾತಾವರಣ ಮತ್ತು ಆಹ್ಲಾದಕರ ವಾತಾವರಣವು ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಭಾಷೆ ಬದಲಾಯಿಸಿ

error: Content is protected !!