ಕೆ ವಿ ಅಕ್ಷರ

ಅಕ್ಷರ ಕೆ ವಿ ಇವರು ಕರ್ನಾಟಕದ ಓರ್ವ ಪ್ರಸಿದ್ಧ ರಂಗಕರ್ಮಿ, ಸಂಸ್ಕೃತಿ ಚಿಂತಕ ಮತ್ತು ಸಾಹಿತಿ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ಜನಿಸಿದರು. ಇವರ ತಂದೆ ಕೆ.ವಿ.ಸುಬ್ಬಣ್ಣ ಕೂಡಾ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿಯಾಗಿದ್ದರು. ಇವರ ಪ್ರಸಿದ್ಧ ನಾಟಕ ತಂಡದ ಹೆಸರು ನೀನಾಸಂ. ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಮತ್ತು ಇಂಗ್ಲೇಂಡಿನ ಲೀಡ್ಸ್ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿದ್ದಾರೆ.

ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ರಂಗಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕೆ.ವಿ. ಅಕ್ಷರ ಅವರು ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕ. ಖ್ಯಾತ ರಂಗ ನಿರ್ದೇಶಕರಾಗಿರುವ ಅವರು ಸೃಜನಶೀಲ ಸಾಹಿತಿ, ನಾಟಕ, ಕವನ, ಪ್ರಬಂಧಗಳನ್ನು ರಚಿಸಿದ್ದಾರೆ.

ಸಹ್ಯಾದ್ರಿಕಾಂಡ, ಚೂರಿಕಟ್ಟೆ (ನಾಟಕಗಳು), ಹದಿಹರೆಯದ ಹಾಡುಗಳು (ಕವನ ಸಂಕಲನ), ರಂಗಪ್ರಪಂಚ, ರಂಗಪ್ರಯೋಗ, ರಂಗ ಅನ್ವೇಷಣೆ, ರಂಗಭೂಮಿ- ಪೂರ್ವ ಪಶ್ಚಿಮ (ರಂಗಕೃತಿ), ಮಾವಿನ ಮರದಲ್ಲಿ ಬಾಳೆಹಣ್ಣು (ವಿಮರ್ಶೆ). ಕರ್ನಾಟಕ ನಾಟಕ ಅಕಾಡೆಮಿಯ ಫೆಲೋಶಿಪ್ (2000) ಲಭಿಸಿದೆ.

ಶಿವಮೊಗ್ಗವು ಜಲಪಾತಗಳು, ಕಾಡುಗಳು ಮತ್ತು ಬೆಟ್ಟಗಳು ಸೇರಿದಂತೆ ಸುಂದರವಾದ ನೈಸರ್ಗಿಕ ತಾಣಗಳಿಂದ ಆವೃತವಾಗಿದೆ, ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಈ ಪ್ರದೇಶದ ಪ್ರಶಾಂತ ವಾತಾವರಣ ಮತ್ತು ಆಹ್ಲಾದಕರ ವಾತಾವರಣವು ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಭಾಷೆ ಬದಲಾಯಿಸಿ

error: Content is protected !!