ಎನ್ ಡಿಸೋಜ
ನಾ. ಡಿಸೋಜ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 06 ರಂದು ಜನಿಸಿದರು. ಇವರ ತಂದೆಯಾ ಹೆಸರು ಎಫ್.ಪಿ. ಡಿಸೋಜ, ಇವರು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಮತ್ತು ತಾಯಿ ರೂಪೀನಾ ಡಿಸೋಜ. ತಂದೆ ಶಾಲಾ ಮಕ್ಕಳಿಗೆ ಕಲಿಸಲು ಬರೆದುಕೊಂಡಿದ್ದ ಪುಸ್ತಕಗಳಲ್ಲಿನ ಪದ್ಯಗಳನ್ನು ಕಲಿಯುವುದರ ಮೂಲಕ ಡಿಸೋಜ ಅವರ ಸಾಹಿತ್ಯಾಸಕ್ತಿ ಮೊಳಕೆಯೊಡೆಯತೊಡಗಿತ್ತು.
ನಾ. ಡಿಸೋಜ ಮೊದಲಿಗೆ ಪ್ರಪಂಚ ಎಂಬ ಪತ್ರಿಕೆಗೆ ಕಥೆಗಳನ್ನು ಬರೆಯತೊಡಗಿದರು. ನಂತರ ಇವರು ಬರೆದಿರುವ ಕಥೆಗಳು ಎಲ್ಲ ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗತೊಡಗಿದವು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟವಾದದ್ದು 1964 ರಲ್ಲಿ. ನಂತರ ಮಂಜಿನ ಕಾನು, ಈ ನೆಲ ಈಜಲ, ಕೆಂಪು ತ್ರಿಕೋನ, ನೆಲೆ, ಮಾನವ ಹೀಗೆ ಸುಮಾರು ೪೦ ಕ್ಕೂ ಅಧಿಕ ಕಾದಂಬರಿಗಳನ್ನು ಬರೆದರೂ. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ ಹೀಗೆ ಹಲವು ಹತ್ತು ವಿಷಯಗಳನ್ನೊಳಗೊಂಡ ಅವರ ಕಾದಂಬರಿಗಳು ಓದುಗರ ಮನಸೂರೆಗೊಂಡಿವೆ. ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿರುವ ನಾ.ಡಿಸೋಜ ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದಲ್ಲಿ ೧೨ ಕೃತಿಗಳನ್ನು ಪ್ರಕಟಿಸಿದ್ದಾರೆ.
ಇವರಿಗೆ ಪಂಪ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಮಂಗಳೂರು ಸಂದೇಶ ಪ್ರಶಸ್ತಿ, ಗುಲ್ವಾಡಿ ವೆಂಕಟರಾವ ಪ್ರಶಸ್ತಿ ಹಾಗು ಇನ್ನು ಇತರೆ ಪ್ರಶಸ್ತಿಗಳು ದೊರಕಿವೆ.